
ಕ್ಯಾನ್ಸರ್ ಕಾರಣದಿಂದ ಚಿಕಿತ್ಸೆ ಪಡೆಯಲು ಅಮೆರಿಕಾಗೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಇಂದು ಬೆಂಗಳೂರಿಗೆ ವಾಪಸ್ಸು ಬಂದಿದ್ದಾರೆ.
ಆರೋಗ್ಯ ಆರೋಗ್ಯದಲ್ಲಿ ಸಂಪೂರ್ಣವಾಗಿ ಸುಧಾರಿಸಿಕೊಂಡಿರುವ ಶಿವರಾಜ್ ಕುಮಾರ್ ಅವರು ಮಾರ್ಚ್ ನಿಂದ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ. ಕೆಲವು ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ಶಿವಣ್ಣ ಇಚ್ಚಿಸಿದ್ದಾರೆ.
ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಕುಟುಂಬಸ್ಥರು ಇಂದು ಶಿವಣ್ಣನನ್ನು ಭೇಟಿಯಾಗಿ ಮಾತನಾಡಿಸಿದ್ದಾರೆ.
ಬೆಂಗಳೂರಿಗೆ ಬಂದ ಶಿವಣ್ಣನಿಗೆ ಅವರ ಅಭಿಮಾನಿಗಳು ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ…